ಮುಖಪುಟ :: ಗಣೇಶ ವಿಸರ್ಜನೆ: ಕೆರೆಗೆ ಬಿದ್ದು ಯುವಕನ ಸಾವು
ಗಣೇಶ ವಿಸರ್ಜನೆ: ಕೆರೆಗೆ ಬಿದ್ದು ಯುವಕನ ಸಾವು
ಉಚ್ಚಿಲ, ಸೆ. ೬: ಸಾರ್ವಜನಿಕ ಗಣೇಶೋತ್ಸವದ ಗಣಪತಿ ವಿಸರ್ಜನೆಯ ವೇಳೆ ಕೆರೆಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಇಂದು ಉಚ್ಚಿಲದಲ್ಲಿ ಸಂಭವಿಸಿರುವುದು ವರದಿಯಾಗಿದೆ.
ಮೃತನನ್ನು ಅದಮಾರು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ನಿಶಿಕಾಂತ್ ಎಂದು ಗುರುತಿಸಲಾಗಿದೆ.
ಉಚ್ಚಿಲದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವದ ಗಣಪತಿ ವಿಸರ್ಜನೆಯ ಸಂದರ್ಭ ನಿಶಿಕಾಂತ್ ಕೆರೆಗೆ ಬಿದ್ದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಅಗ್ನಿ ಶಾಮಕ ದಳದವರು ಆಗಮಿಸಿ ಮೃತದೇಹವನ್ನು ಮೇಲಕ್ಕೆತ್ತಿದರು. ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಕಿ ಹಚ್ಚಿ ಯುವತಿಯ ಆತ್ಮಹತ್ಯೆ
ಪುತ್ತೂರು, ಸೆ. ೬: ಅವಿವಾಹಿತ ಯುವತಿಯೋರ್ವಳು ಮೈಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಪುತ್ತೂರು ನಗರ ಸಮೀಪದ ಪಡೀಲ್ ನಿವಾಸಿ ಗೋಪಾಲಕೃಷ್ಣ ಸಾಲ್ಯಾನ್ ಎಂಬವರ ಪುತ್ರಿ ಸುನೀತಾ (೨೦) ಎಂದು ಗುರುತಿಸಲಾಗಿದೆ.
ಈಕೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮೈಗೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರದ ಅಡಿಕೆ ಸಂರಕ್ಷಣಾ ಘಟಕವೊಂದರಲ್ಲಿ ಕಾರ್ಮಿಕಳಾಗಿ ದುಡಿಯುತ್ತಿದ್ದ ಸುನೀತಾ, ಜೀವನದಲ್ಲಿ ಜಿಗುಪ್ಸೆಗೊಂಡು ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- ಪ್ರತಿಕ್ರಿಯೆ ಸೇರಿಸಲು ಲಾಗಿನ್ ಆಗಿ ಅಥವ ನೋಂದಾಯಿಸಿಕೊಳ್ಳಿ
- 22 ಬಾರಿ ಓದಲ್ಪಟ್ಟಿದೆ.




