ಮುಖಪುಟ :: ಪೆಟ್ರೋಲ್ ಬೆಲೆ ಇಳಿಸಿ: ವರದರಾಜನ್
ಪೆಟ್ರೋಲ್ ಬೆಲೆ ಇಳಿಸಿ: ವರದರಾಜನ್
ಸಿಪಿಎಂನಿಂದ ಹೋರಾಟದ ಎಚ್ಚರಿಕೆ
ಮಂಗಲೂರು, ಅ.೨೫: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಉತ್ಪನ್ನಗಳ ಬೆಲೆಗಳು ಇಳಿದಿರುವ ಕಾರಣ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಶೀಘ್ರವೇ ಇಳಿಸಬೇಕು. ಇಲ್ಲವಾದಲ್ಲಿ ಹೋರಾಟ ನಡೆಸಲಾಗುವುದು ಎಂದು ಸಿಪಿಎಂ ಪಕ್ಷದ ಪಾಲಿಟ್‌ಬ್ಯೂರೋ ಸದಸ್ಯ ಕೆ.ವರದರಾಜನ್ ಎಚ್ಚರಿಸಿದ್ದಾರೆ.
ಮಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿನಬಳಕೆ ಸೇರಿದಂತೆ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಸರಕಾರ ವಿಫಲವಾಗಿದೆ ಎಂದು ಕೇಂದ್ರ ಸರಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಮುಂಬೈ ಶೇರು ಮಾರುಕಟ್ಟೆ ತೀವ್ರ ಕುಸಿತ, ದೇಶದಲ್ಲಿನ ಆರ್ಥಿಕ ಹಿನ್ನಡೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವರದರಾಜನ್, ಯುಪಿಎ ಸರಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು. ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸರ್ವಪಕ್ಷಗಳ ಸಭೆಗೆ ತಾವು ಒತ್ತಾಯಿಸುವುದಾಗಿ ಹೇಳಿದರು.
ಮಾಲೆಗಾಂವ್ ಹಾಗೂ ಮೋಡಸ ಸೋಟ ಪ್ರಕರಣಗಳ ಆರೋಪಿಗಳಿಗೆ ಸಂಬಂಸಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ವರದರಾಜನ್, ಆರೋಪಿಗಳು ಯಾರು ಎಂಬುದು ಮುಖ್ಯವಲ್ಲ, ತಪ್ಪಿತಸ್ಥರಿಗೆ ಶಿಕ್ಷೆಯಾಗುವುದು ಮುಖ್ಯ ಎಂದರು.
- ಪ್ರತಿಕ್ರಿಯೆ ಸೇರಿಸಲು ಲಾಗಿನ್ ಆಗಿ ಅಥವ ನೋಂದಾಯಿಸಿಕೊಳ್ಳಿ
- 54 ಬಾರಿ ಓದಲ್ಪಟ್ಟಿದೆ.




