ಮುಖಪುಟ :: ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ನೇಮಕ
ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ನೇಮಕ
ಬೆಂಗಳೂರು, ಅ.೩೧: ಮೀರಾಜುದ್ದೀನ್ ಪಟೇಲ್‌ರ ನಿಧನದಿಂದ ತೆರವಾಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸಸ್ವಾಮಿಯವರನ್ನು ನೇಮಿಸಲಾಗಿದೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ರ ನೇತೃತ್ವದಲ್ಲಿ ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಮುಖಂಡರ ಹಾಗೂ ಪದಾಕಾರಿಗಳ ಸಭೆಯಲ್ಲಿ ಕುಮಾರಸ್ವಾಮಿಯವರನ್ನು ಜೆಡಿಎಸ್‌ನ ನೂತನ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ದೇವೇಗೌಡರು ಕುಮಾರಸ್ವಾಮಿಯವರ ಆಯ್ಕೆಗೆ ಮೊದಲು ವಿರೋಧ ವ್ಯಕ್ತಪಡಿಸಿದ್ದರು.
ಆದರೆ, ಸಭೆಯಲ್ಲಿ ಹಾಜರಿದ್ದ ಜಿಲ್ಲಾಧ್ಯಕ್ಷರು ಹಾಗೂ ಪದಾಕಾರಿಗಳ ಸರ್ವಾನುಮತದ ಅಭಿಪ್ರಾಯಕ್ಕೆ ಅವರು ಮಣಿಯಲೇಬೇಕಾಯಿತು ಎಂದು ಸಭೆಯ ನಂತರ ಪಕ್ಷದ ಕಾರ್ಯಧ್ಯಕ್ಷ ಸಿ. ನಾರಾಯಣಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯ ಘಟಕಕ್ಕೆ ಲಿಂಗಾಯಿತ ಅಥವಾ ಅಲ್ಪಸಂಖ್ಯಾತ ಸಮುದಾಯದ ಮುಖಂಡರೊಬ್ಬರನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂಬ ಇಂಗಿತ ದೇವೇಗೌಡರಿಗಿತ್ತೆಂದು ಅವರು ಹೇಳಿದರು.
- ಪ್ರತಿಕ್ರಿಯೆ ಸೇರಿಸಲು ಲಾಗಿನ್ ಆಗಿ ಅಥವ ನೋಂದಾಯಿಸಿಕೊಳ್ಳಿ
- 77 ಬಾರಿ ಓದಲ್ಪಟ್ಟಿದೆ.





